ಲಿಂಗ ತಾರತಮ್ಯ ತಲೆತಲಾಂತರಗಳಿಂದ ಅವ್ಯಾಹತವಾಗಿ ನಡೆಯುತ್ತ ಬಂದರೂ ದನಿಯಿಲ್ಲದವಳಾಗಿದ್ದ ಹೆಣ್ಣು ಇತ್ತೀಚೆಗಷ್ಟೇ ತನ್ನ ಮೇಲಾಗುವ ಅನ್ಯಾಯವನ್ನು, ಅದರ ಕಾರಣಗಳನ್ನು ಗುರುತಿಸುವ, ದನಿಯೆತ್ತಿ ಪ್ರತಿಭಟಿಸುವ ದಾರಿಯಲ್ಲಿ ಮೊದಲ ಹೆಜ್ಜೆಗಳನ್ನಿಡುತ್ತಿದ್ದಾಳೆ. ಸಂಘಟಿತ ಪ್ರಯತ್ನವೊಂದೆ ತನ್ನ ಸಮಾನತೆಯ ಕನಸುಗಳ ಸಾಕಾರಕ್ಕೆ ಇರುವ ದಾರಿ ಎಂದು ಕಂಡುಕೊಂಡಿದ್ದಾಳೆ. ಸಾಮಾಜಿಕ ನ್ಯಾಯದ ಚಳುವಳಿಗಳಲ್ಲಿ ಲಿಂಗಪ್ರಶ್ನೆಯೂ ಮುನ್ನೆಲೆಗೆ ಬಂದು ಮಹಿಳೆಯರು ಸಕ್ರಿಯವಾಗಿ ಪಾಲ್ಗೊಳ್ಳುತ್ತಿದ್ದಾರೆ.
ಕರ್ನಾಟಕದಲ್ಲೂ ಅನೇಕ ಸಂಘ- ಸಂಘಟನೆ-ಚಳುವಳಿಗಳು ಮಹಿಳಾ ಸಮಸ್ಯೆಗಳನ್ನೆತ್ತಿಕೊಂಡು ದಶಕಗಳಿಂದ ಸಕ್ರಿಯವಾಗಿವೆ. ಕರ್ನಾಟಕದ ಅಂತಹ ಮಹಿಳಾಪರ ವ್ಯಕ್ತಿ-ಸಂಘ-ಸಂಘಟನೆಗಳ ಜಾಲವೇ ಕರ್ನಾಟಕ ರಾಜ್ಯ ಮಹಿಳಾ ದೌರ್ಜನ್ಯ ವಿರೋಧಿ ಒಕ್ಕೂಟ.